

ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವಿವಿಧ ಹುದ್ದೆಗಳಿಗೆ ಡಿ. 4 ರಂದು ನಡೆಯಲಿರುವ ಚುನಾವಣೆಯಲ್ಲಿ ನಿರ್ದೇಶಕರು ಹಾಗೂ ತಾಲ್ಲೂಕು ಘಟಕಗಳ ಅಧ್ಯಕ್ಷರು ತಮ್ಮ ಪೆನಾಲ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಸಂಘದ ಜಿಲ್ಲಾ ಘಟಕದ ಹಾಲಿ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮನವಿ ಮಾಡಿದ್ದಾರೆ.
ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಸತತ ಮೂರನೇ ಬಾರಿಗೆ ಸ್ಪರ್ಧಿಸಿದ್ದೇನೆ. ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಮ್ಮ ಪೆನಾಲ್‍ನಿಂದ ಬಸವರಾಜ ಜಕ್ಕಾ ಹಾಗೂ ಜಿಲ್ಲಾ ಘಟಕದ ಖಜಾಂಚಿ ಸ್ಥಾನಕ್ಕೆ ಮನೋಹರ ಕಾಶಿ ಸ್ಪರ್ಧೆಯಲ್ಲಿ ಇದ್ದಾರೆ ಎಂದು ತಿಳಿಸಿದ್ದಾರೆ.
ಸಂಘವನ್ನು ಇನ್ನಷ್ಟು ಬಲಪಡಿಸಲು ಹಾಗೂ ನೌಕರರ ಹಿತ ರಕ್ಷಣೆಗೆ ಚುನಾಯಿತರೆಲ್ಲರ ಸಹಕಾರ ಅಗತ್ಯವಿದೆ. ಬಹುತೇಕರು ತಮ್ಮನ್ನು ಬೆಂಬಲಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ನಮ್ಮ ಪೆನಾಲ್ ಜಯಭೇರಿ ಖಚಿತವಾಗಿದೆ. ಪ್ರತಿಸ್ಪರ್ಧಿಗಳು ಸೋಲಿನ ಭೀತಿಯಿಂದ ನಮ್ಮ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.