ಬಾಬಾಸಾಹೇಬಗೆ ಸಂಗೀತ ನುಡಿನಮನ 6ರಂದು

dss photo
Published on

ಬೀದರ್: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 68ನೇ ಪರಿನಿರ್ವಾಣ ದಿನ ನಿಮಿತ್ತ ಶೋಷಿತ ಸಮುದಾಯಗಳ ಐಕ್ಯತಾ ಮತ್ತು ಸಂಗೀತ ನುಡಿನಮನ ಕಾರ್ಯಕ್ರಮ ಶುಕ್ರವಾರ ನಗರದಲ್ಲಿ ಅರ್ಥಪೂರ್ಣವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಮಹಾಪ್ರಧಾನ ಕಾರ್ಯದರ್ಶಿ ಅನೀಲಕುಮಾರ ಬೆಲ್ದಾರ್ ಹೇಳಿದರು.

ದಲಿತ ಸಂಘಟನೆಗಳ ಒಕ್ಕೂಟ ಸಂಘಟಿಸಿದ ಕಾರ್ಯಕ್ರಮದಲ್ಲಿ ಸಂಗೀತದ ಮೂಲಕ ಬಾಬಾಸಾಹೇಬಗೆ ನುಡಿನಮನ ಸಲ್ಲಿಸಲಾಗುವುದು. ಜಿಲ್ಲೆಯ 15ಕ್ಕೂ ಅಧಿಕ ಭಜನಾ ತಂಡಗಳನ್ನು ಆಹ್ವಾನಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಸಕ್ತ ವರ್ಷ ಚಳಿ ಅಧಿಕ ಇದ್ದುದರಿಂದ ರಾತ್ರಿ ಬದಲು ಬೆಳಗ್ಗೆ ಕಾರ್ಯಕ್ರಮ ಮಾಡಲಾಗುತ್ತಿದೆ. ಬೆಳಗ್ಗೆ 10ಕ್ಕೆ ಅಂಬೇಡ್ಕರ್ ವೃತ್ತದ ಸಮೀಪ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಮ್ ಖಾನ್, ಸಂಸದ ಸಾಗರ್ ಖಂಡ್ರೆ, ಶಾಸಕರಾದ ಪ್ರಭು ಚವ್ಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ಮಾಜಿ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ, ಡಾ.ಚಂದ್ರಶೇಖರ ಪಾಟೀಲ್ ಇತರರು ಪಾಲ್ಗೊಳ್ಳುವರು ಎಂದರು.

ದಸಂಸ ರಾಜ್ಯ ಸಂಘಟನಾ ಸಂಚಾಲಕ (ಅಂಬೇಡ್ಕರ್ ವಾದ) ರಮೇಶ ಡಾಕುಳಗಿ, ಪ್ರಮುಖರಾದ ಬಾಬು ಪಾಸ್ವಾನ್, ಶಿವಕುಮಾರ ನೀಲಿಕಟ್ಟಿ, ಶ್ರೀಪತರಾವ ದೀನೆ, ಸಂದೀಪ ಕಾಂಟೆ, ಮಾರುತಿ ಕಂಟಿ, ಪ್ರದೀಪ ನಾಟೇಕರ್, ಶಾಲಿವಾನ ಬಡಿಗೇರ, ಸುನೀಲ ಸಂಗಮ, ಬಾಬು ಮಿಠಾರೆ, ಗೌತಮ ಪ್ರಸಾದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net