

ಬೀದರ್: ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಬೀದರ್ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಕಮಠಾಣ ಸರ್ಕಾರಿ ಉರ್ದು ಪ್ರೌಢಶಾಲೆಯ ಸಹ ಶಿಕ್ಷಕ ವೈಜಿನಾಥ ಸಾಳೆ ಅವರನ್ನು ನೇಮಕ ಮಾಡಲಾಗಿದೆ.
ಸಂಘ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಈ ಹಿಂದೆ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಎಂ.ಡಿ. ಶಬೊದ್ದೀನ್ ಅವರನ್ನು ಅಧ್ಯಕ್ಷ ಸ್ಥಾನ ಹಾಗೂ ಸಂಘದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದ್ದು, ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ತಿಳಿಸಿದ್ದಾರೆ.