ಡಾ. ಭೀಮಣ್ಣ ಖಂಡ್ರೆಗೆ ರಾಷ್ಟ್ರೀಯ ಪುರಸ್ಕಾರ ಪ್ರದಾನ

Panchacharya Award
Published on

ಬೀದರ್: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ ಅವರಿಗೆ ಭಾಲ್ಕಿಯ ಅವರ ಸ್ವಗೃಹದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಉಪಸ್ಥಿತಿಯಲ್ಲಿ ಶ್ರೀ ಸಿದ್ಧಾಂತ ಶಿಖಾಮಣಿ ಅಭಿಯಾನ ಹಾಗೂ ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಪದಾಧಿಕಾರಿಗಳು ಶಾಲು ಹೊದಿಸಿ, ಫಲಕ ಹಾಗೂ ಪ್ರಶಸ್ತಿ ಪತ್ರ ಪ್ರದಾನ ಮಾಡಿದರು.

ಜಗದ್ಗುರು ಪಂಚಾಚಾರ್ಯರು, ಬಸವಾದಿ ಶರಣರ ತತ್ವಗಳ ಪಾಲನೆ ಹಾಗೂ ವೀರಶೈವ ಲಿಂಗಾಯತ ಸಮಾಜಕ್ಕೆ ನೀಡಿದ ಕೊಡುಗೆಗಾಗಿ ಖಂಡ್ರೆ ಅವರಿಗೆ ಪ್ರಶಸ್ತಿ ನೀಡಲಾಗಿದೆ ಎಂದು ನೌಬಾದ್‍ನ ಜ್ಞಾನ ಶಿವಯೋಗಾಶ್ರಮದ ಡಾ. ರಾಜಶೇಖರ ಸ್ವಾಮೀಜಿ ಗೋರ್ಟಾ ತಿಳಿಸಿದರು.

ಪಂಚ ಪೀಠಾಧೀಶರ ಮಾರ್ಗದರ್ಶನದಂತೆ ಪ್ರಸಕ್ತ ವರ್ಷದಿಂದ ಶ್ರೀ ಜಗದ್ಗುರು ಪಂಚಾಚಾರ್ಯ ರಾಷ್ಟ್ರೀಯ ಪುರಸ್ಕಾರ ನೀಡಲು ಆರಂಭಿಸಲಾಗಿದೆ. ಮೊದಲ ವರ್ಷ ಭೀಮಣ್ಣ ಖಂಡ್ರೆ ಅವರು ಸೇರಿದಂತೆ ಐವರಿಗೆ ಪ್ರಶಸ್ತಿ ಕೊಡಲಾಗಿದೆ. ಕಾರಣಾಂತರದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗದ ಕಾರಣ ಖಂಡ್ರೆ ಅವರಿಗೆ ಇದೀಗ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಹೇಳಿದರು.

ಪ್ರಮುಖರಾದ ವರದಯ್ಯ ಸ್ವಾಮಿ, ಮಹೇಶ ಪಾಟೀಲ, ಶ್ರೀಕಾಂತ ಭೋರಾಳೆ, ಮಹಾಂತೇಶ ಬಿರಾದಾರ, ನಾಗರಾಜ ಮಠ, ಬಸವರಾಜ ಹಾಲಹಳ್ಳಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net