

ಬೀದರ್: ಲೋಕಸಭೆ ಹಾಗೂ ವಿಧಾನಸಭೆಯಲ್ಲೂ ಹಿಂದುಳಿದ ವರ್ಗಗಳಿಗೆ ಮೀಸಲು ಕಲ್ಪಿಸಬೇಕು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ಒತ್ತಾಯಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲು ನೀಡಲಾಗಿದೆ. ಆದರೆ, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮೀಸಲು ಮರೀಚಿಕೆಯಾಗಿದೆ ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗದವರಿಗೂ ರಾಜಕೀಯದಲ್ಲಿ ಉನ್ನತ ಸ್ಥಾನಗಳು ದೊರಕುವಂತಾಗಲು ಮೀಸಲಾತಿ ಅಗತ್ಯವಿದೆ ಎಂದು ಹೇಳಿದ್ದಾರೆ.
ಶಾಸನ ಸಭೆಗಳಲ್ಲಿ ಮೀಸಲಾತಿ ಕಲ್ಪಿಸುವ ಮೂಲಕ ಹಿಂದುಳಿದ ವರ್ಗಗಳಿಗೂ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.