ಅಂಬೇಡ್ಕರ್ ಭವನ ನಿರ್ಮಿಸಿ

Mahesh Rampure
Published on

ಬೀದರ್: ಜಿಲ್ಲಾ ಕೇಂದ್ರ ಬೀದರ್‍ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ದಿ ಬುದ್ಧ ಯುವಕ ಸಂಘದ ಅಧ್ಯಕ್ಷ ಮಹೇಶ ರಾಂಪುರೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ನಗರದಲ್ಲಿ ಸರ್ಕಾರದಿಂದ ಭೂಮಿ ಮಂಜೂರು ಮಾಡಿ ಬಹುತೇಕ ಸಮುದಾಯದವರ ಭವನ ನಿರ್ಮಾಣ ಮಾಡಲಾಗುತ್ತಿದೆ. ಆದರೆ, ಪರಿಶಿಷ್ಟರಿಗೆ ಮಾತ್ರ ಭವನ ಇಲ್ಲ ಎಂದು ಹೇಳಿದರು.

ಭವನ ಮಂಜೂರು ಮಾಡುವಲ್ಲಿ ಜಾತಿ ತಾರತಮ್ಯ ಮಾಡಲಾಗುತ್ತಿದೆ ಎಂದು ತೀವ್ರ ಅಸಮಾಧಾನ ಹೊರ ಹಾಕಿದರು.

ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಲ್ಲಿ ಪರಿಶಿಷ್ಟರಿಗೆ ಭವನ ನಿರ್ಮಿಸಲು ಭೂಮಿ ಮಂಜೂರು ಮಾಡಬೇಕು. ಬೇಗ ಭವನ ನಿರ್ಮಿಸಿ ಸಮುದಾಯಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net