ಮಲ್ಲಣ್ಣ ದೇವಸ್ಥಾನ: ಸಿಇಒ ವಿಶೇಷ ಪೂಜೆ

CEO Visit To Mailar Temple - Copy
Published on

ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದ ಮಲ್ಲಣ್ಣ ದೇವಸ್ಥಾನದಲ್ಲಿ ಜಾತ್ರೆ ನಿಮಿತ್ತ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಅವರಿಗೆ ಮೈಸೂರು ಪೇಟ ತೊಡಿಸಿ, ಕಂಬಳಿ ಹೊದಿಸಿ ಸತ್ಕರಿಸಲಾಯಿತು.

ಭಾಲ್ಕಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸೂರ್ಯಕಾಂತ ಬಿರಾದಾರ, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ, ವ್ಯವಸ್ಥಾಪಕ ಸಂಜೀವಕುಮಾರ ಸುಂದಾಳ, ಪ್ರಧಾನ ಅರ್ಚಕ ಬಸಪ್ಪ ಹಿರಿವಗ್ಗೆ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net