

ಭಾಲ್ಕಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬಸವಕಲ್ಯಾಣದ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರ ಅನಾವರಣಗೊಂಡಿರುವುದು ಹರ್ಷ ತರಿಸಿದೆ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.
12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ವರ್ಣರಹಿತ, ಜಾತಿರಹಿತ ಸಮಾಜ ಕಟ್ಟಬಯಸಿದ್ದರು. ಬಸವಣ್ಣನವರು ಕಟ್ಟಿದ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿಗೆ ಸಮಾನ ಅವಕಾಶ ಕಲ್ಪಿಸಿದರು. ಆ ಅನುಭವ ಮಂಟಪ ಈಗ ವಿಶ್ವದ ಮೊದಲ ಸಂಸತ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಬಸವಾದಿ ಶರಣರ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪದ ಬೃಹತ್ ಚಿತ್ರ ಅನಾವರಣ ಮಾಡಿರುವುದು ಅತ್ಯಂತ ಖುಷಿ ತಂದು ಕೊಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.