ನರೇಗಾ ಪರಿಣಾಮಕಾರಿ ಅನುಷ್ಠಾನಗೊಳಿಸಿ

9blk3
Published on

ಭಾಲ್ಕಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಪಂ ಸಿಇಒ ಡಾ.ಗಿರೀಶ್ ಬದೋಲೆ ಹೇಳಿದರು.

ತಾಲೂಕಿನ ಮೇಥಿ ಮೇಳಕುಂದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಬಡ ಜನರು ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಗಟ್ಟಲು ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸರ್ಕಾರದ ಮಾರ್ಗದರ್ಶನ ಹಾಗೂ ಸೂಚನೆಗಳಿಗೆ ಅನುಗುಣವಾಗಿ ನರೇಗಾ ಕಾಮಗಾರಿಗಳನ್ನು ಆಯ್ಕೆ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ, ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ಇತರರಿದ್ದರು.

ಭಾತಂಬ್ರಾ ಕೋಟೆಗೆ ಭೇಟಿ: ಇದಕ್ಕೂ ಮುನ್ನ ತಾಲೂಕಿನ ಭಾತಂಬ್ರಾ ಗ್ರಾಮದ ಹೊರ ವಲಯದಲ್ಲಿನ ಐತಿಹಾಸಿಕ ಕೋಟೆಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಬದೋಲೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net