ಆದಿತ್ಯ ಠಾಕ್ರೆ ಹೇಳಿಕೆಗೆ ಸೇನೆ ತೀವ್ರ ಖಂಡನೆ

Ganesh patil Janti
Published on

ಬೀದರ್: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು ಎಂದು ಮಹಾರಾಷ್ಟ್ರದ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಆದಿತ್ಯ ಠಾಕ್ರೆ ನೀಡಿರುವ ಹೇಳಿಕೆಯನ್ನು ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಆದಿತ್ಯ ಠಾಕ್ರೆ ಹೇಳಿಕೆ ವಿವೇಕ ರಹಿತ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಟೀಕಿಸಿದ್ದಾರೆ.

ತಮ್ಮ ಬಾಲ ಬುಡುಕರನ್ನು ಖುಷಿಪಡಿಸಲು ಠಾಕ್ರೆ ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಕನ್ನಡಿಗರು ಹಾಗೂ ಮರಾಠಿಗರ ನಡುವಿನ ಸೌಹಾರ್ದ ಸಂಬಂಧಕ್ಕೆ ಧಕ್ಕೆ ಉಂಟು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡಿ ವಿಚಾರದಲ್ಲಿ ಮಹಾಜನ ವರದಿ ಅಂತಿಮ. ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಠಾಕ್ರೆ ಏನೇ ಹೇಳಿಕೆ ನೀಡಿದರೂ ಅದನ್ನು ಒಪ್ಪಲಾಗದು ಎಂದಿದ್ದಾರೆ.

ಶಿವಸೇನೆಯವರು ಬೆಳಗಾವಿ ವಿಷಯದಲ್ಲಿ ತಗಾದೆ ತೆಗೆದರೆ, ನಾವು ಕನ್ನಡ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಲಾತೂರ, ಸೋಲಾಪುರ, ಪುಣೆ, ಅಕ್ಕಲಕೋಟ, ಮುಂಬೈ ಮೊದಲಾದ ಪ್ರದೇಶಗಳು ಮಹಾರಾಷ್ಟ್ರ ಆಕ್ರಮಿತ ಕರ್ನಾಟಕದ ಪ್ರದೇಶಗಳೆಂದು ಕ್ಯಾತೆ ತೆಗೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net