ತೈಲವರ್ಣ ಚಿತ್ರ ಅನಾವರಣಕ್ಕೆ ಹರ್ಷ

Dhanraj
Published on

ಬಸವಕಲ್ಯಾಣ: ಜಗತ್ತಿನ ಮೊದಲ ಸಂಸತ್ ಹೆಗ್ಗಳಿಕೆಯ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರವನ್ನು ಬೆಳಗಾವಿ ಸುವರ್ಣಸೌಧದಲ್ಲಿ ಅಳವಡಿಸಿದ್ದು ಬಸವ ಅಭಿಮಾನಿಗಳಿಗೆ ಖುಷಿ ತಂದಿದೆ ಎಂದು ಕಾಂಗ್ರೆಸ್ ಮುಖಂಡ, ಉದ್ಯಮಿ ಧನರಾಜ ತಾಳಂಪಳ್ಳಿ ತಿಳಿಸಿದ್ದಾರೆ. ಜಗತ್ತಿಗೆ ಸಮಾನತೆ ಸಂದೇಶ ನೀಡಿದ ಅಣ್ಣ ಬಸವಣ್ಣನವರ ತತ್ವ, ಸಂದೇಶಗಳನ್ನು ಎಲ್ಲೆಡೆ ವ್ಯಾಪಕ ಪ್ರಚಾರ ಮಾಡಬೇಕಿದೆ. ಈ ನಿಟ್ಟಿನಲ್ಲಿ ಅನುಭವ ಮಂಟಪ ಚಿತ್ರವನ್ನು ಚಳಿಗಾಲದ ಅವೇಶನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಇತರರು ಅನಾವರಣಗೊಳಿಸಿದ್ದಕ್ಕೆ ಪ್ರಕಟಣೆಯಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net