ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ 13ರಂದು

BJP
Published on

ಬೀದರ್: ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಇರುವ ಅನುದಾನ ಕಡಿತಗೊಳಿಸಿದ ಸಿಎಂ ಸಿದ್ದರಾಮಯ್ಯ ಕ್ರಮದ ವಿರುದ್ಧ ಜಿಲ್ಲಾ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಡಿ.13 (ಶುಕ್ರವಾರ) ಬೆಳಗ್ಗೆ 11ಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸಾಕಷ್ಟು ಅನುದಾನವನ್ನು ಬಜೆಟ್ನಲ್ಲಿ ಮೀಸಲಿಡಲಾಗಿತ್ತು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದುಳಿದ ವರ್ಗಗಳಿಗೆ ಅನುದಾನ ಕಡಿತ ಮಾಡಿ ಅನ್ಯಾಯ ಮಾಡಿದ್ದಾರೆ. ಹೋರಾಟದಲ್ಲಿ ಪಕ್ಷದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮೊರ್ಚಾದ ಜಿಲ್ಲಾಧ್ಯಕ್ಷ ಅರವಿಂದ ಮುತ್ಯಾ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net