

ಬಸವಕಲ್ಯಾಣ: ಸಂಸ್ಥಾನ ಗವಿಮಠದ ಶ್ರೀ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರ ಅಭಿನಂದನಾ ಸಮಾರಂಭ ಡಿ.15ರಂದು ಮಧ್ಯಾಹ್ನ 1ಕ್ಕೆ ನಗರದ ಗವಿಮಠದಲ್ಲಿ ಆಯೋಜಿಸಲಾಗಿದೆ. ಪೂಜ್ಯರ ವ್ಯಸನ ಮುಕ್ತ ಸಮಾಜ ಸೇವೆ ಗುರುತಿಸಿ ಬಳ್ಳಾರಿಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆಯಿಂದ ಇತ್ತೀಚೆಗೆ ಕರ್ನಾಟಕ ಸಾಧಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿತ್ತು. ಹೀಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆ ಕೋರಿದೆ.