

ಬಸವಕಲ್ಯಾಣ: ಮಾದಿಗರ ಮೂರು ದಶಕದ ಬೇಡಿಕೆಯಾದ ಒಳಮೀಸಲಾತಿ ಜಾರಿ ಮಾಡುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆದರೆ ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವಿಜಯಕುಮಾರ ಹಿಪ್ಪಳಗಾಂವ ದೂರಿದರು.
ಈಗಾಗಲೇ ಪಂಜಾಬ್ ಹಾಗೂ ಹರಿಯಾಣ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಿವೆ. ಆದರೆ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿರುವುದು ಸರಿಯಲ್ಲ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.16ರಂದು ಬೆಳಗಾವಿ ಸುವರ್ಣಸೌಧ ಎದುರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದರು.
ಮಾದಿಗರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮಿತಿ ಬಸವಕಲ್ಯಾಣ ತಾಲೂಕು ಘಟಕಕ್ಕೆ ಅಧ್ಯಕ್ಷರಾಗಿ ತುಕಾರಾಮ ಲಾಡೆ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಶಾಂತಮ್ಮಾ ಮಾರುತಿ ಇತರ ಪದಾಕಾರಿಗಳ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಮುಖರಾದ ಕಮಲಾಕರ ಹೆಗಡೆ, ಶಿವಣ್ಣ ಹಿಪ್ಪಳಗಾಂವ, ಹರೀಶ್ ಗಾಯಕವಾಡ, ಅಜೀತ್ ಸೂರ್ಯವಂಶಿ ಇತರರಿದ್ದರು.