

ಬೀದರ್: ತಾಲ್ಲೂಕಿನ ವಿಳಾಸಪುರ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನಗೈದ ಘಟನೆಯನ್ನು ಮಹಾ ನಾಯಕ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸಿದೆ.
ಮಹಾ ಪುರುಷರ ಭಾವಚಿತ್ರ, ಮೂರ್ತಿಗಳಿಗೆ ಅವಮಾನಿಸುವುದು ಅಕ್ಷಮ್ಯ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲ್ ದೊಡ್ಡಿ ಹೇಳಿದ್ದಾರೆ.
ವಿಳಾಸಪುರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಜಿಲ್ಲೆಯಲ್ಲಿ ಅಶಾಂತಿಗೆ ಕಾರಣವಾಗುವ ಈ ರೀತಿಯ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಆರೋಪಿಗಳ ಬಂಧನಕ್ಕೆ ವಿಳಂಬ ಮಾಡಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.