ಜಾನಪದ ಸಂಗೀತೋತ್ಸವ 15ರಂದು

swamy
Published on

ಬೀದರ್: ಶ್ರೀ ರೇವಣಸಿದ್ಧೇಶ್ವರ ಕಲಾ ಸಾಂಸ್ಕೃತಿಕ ಸೇವಾ ಸಂಘ ಬಾವಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತಾಲೂಕುಮಟ್ಟದ ಜಾನಪದ ಸಂಗೀತೋತ್ಸವ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮ ತಾಲೂಕಿನ ಕಮಠಾಣ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಡಿ.15 (ಭಾನುವಾರ) ರಂದು ಸಂಜೆ 7ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಶಾಂತಕುಮಾರ ಸ್ವಾಮಿ ತಿಳಿಸಿದ್ದಾರೆ.

ಶಾಸಕ ಡಾ ಶೈಲೇಂದ್ರ ಬೆಲ್ದಾಳೆ ಉದ್ಘಾಟಿಸುವರು. ಶ್ರೀ ರಾಜಶೇಖರ ಶಿವಾಚಾರ್ಯ ವಹಿಸಲಿರುವ ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ರಾಜಶೇಖರ ಶಿವಾಚಾರ್ಯ ಸಾನ್ನಿಧ್ಯ ವಹಿಸುವರು. ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ, ಮಾಜಿ ಶಾಸಕ ಅಶೋಕ ಖೇಣಿ, ಸುರೇಶ ಚನ್ನಶೆಟ್ಟಿ, ಸಿದ್ರಾಮ ಸಿಂಧೆ, ಕುಶಾಲರಾವ ಯಾಬಾ ಇತರರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net