

ಬೀದರ್: ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿ ಗ್ರಾಮದಲ್ಲಿ ಡಿ. 21 ರಂದು ಸಂಜೆ 5ಕ್ಕೆ ತೆಲಂಗಾಣದ ಮಲ್ಲಯ್ಯಗಿರಿ ಹಾಗೂ ದೇಗಲಮಡಿ ಆಶ್ರಮದ ಪೀಠಾಧಿಪತಿ ಡಾ. ಬಸವಲಿಂಗ ಅವಧೂತರ ಪ್ರವಚನ ಹಾಗೂ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗ್ರಾಮದ ಬಸವಲಿಂಗ ಅವಧೂತರ ಸೇವಾ ಸಮಿತಿಯ ಪ್ರಮುಖರು ಮನವಿ ಮಾಡಿದ್ದಾರೆ.