ಕನ್ನಡಿಗರ ಮನೆ ದೇವರು ಪಟ್ಟದ್ದೇವರು

Aurad 1
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Night; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;
Published on

ಔರಾದ್: ನಿಜಾಮನ ಆಳ್ವಿಕೆಯ ಕಾಲದಲ್ಲಿ ಈ ಭಾಗದಲ್ಲಿ ಹೊರಗಡೆ ಉರ್ದು ಬೋಡ್೯ ಹಾಕಿ ಒಳಗಡೆ ಕನ್ನಡವನ್ನು ಕಲಿಸಿದ್ದು ಶ್ರೀ ಡಾ.ಚನ್ನಬಸವ ಪಟ್ಟದ್ದೇವರು. ಈ ಭಾಗದ ಪ್ರತಿ ಮನೆಯ ದೇವರು ಪೂಜ್ಯರಾಗಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಶ್ರೀ ಡಾ.ಚನ್ನಬಸವ ಪಟ್ಟದ್ದೇವರು ಜಯಂತ್ಯುತ್ಸವದಲ್ಲಿ ಮಾತನಾಡಿ, ಎರಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯಲ್ಲಿ ಮಾತೃ ಭಾಷೆ ಕನ್ನಡವನ್ನು ಸಂರಕ್ಷಣೆ ಮಾಡಿದ್ದು ಶ್ರೀಗಳು ಎಂದರು.

ಸಮಾಜದಲ್ಲಿ ಬೇರೂರಿದ್ದ ಅಸಮಾನತೆ, ಜಾತಿ, ಲಿಂಗ ತಾರತಮ್ಯದಂಥ ಸಮಸ್ಯೆಗಳನ್ನು ತೊಡೆದು ಹಾಕಿ ಕಲ್ಯಾಣ ರಾಜ್ಯವಾಗಿಸಲು 12ನೇ ಶತಮಾನದಲ್ಲಿ ಬಸವಾದಿ ಶರಣರು ಹೋರಾಡಿದ್ದರು. ಅವರಂತೆ ಪಟ್ಟದ್ದೇವರು 20ನೇ ಶತಮಾನದಲ್ಲಿ ಶರಣರ ಆಶಯಗಳಿಗಾಗಿಯೇ ಹೋರಾಡಿದ್ದಾರೆ ಎಂದರು.

ಧಾರ್ಮಿಕ ಕೆಲಸಗಳ ಜತೆಗೆ ಶಿಕ್ಷಣದ ಬೆಳವಣಿಗೆಗೆ ಶ್ರಮಿಸಿದ್ದರು. ಶಿಕ್ಷಣ ಸಂಸ್ಥೆಯನ್ನು ತೆರೆದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರು. ಜನ ಜೀವನಕ್ಕೆ ಮಾರಕವಾಗಿರುವ ಮದ್ಯಪಾನ, ಧೂಮಪಾನದಂಥ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು ಎಂದು ಹೇಳಿದರು.

ಪೂಜ್ಯರ ಆಶಯದಂತೆಯೇ ಬಸವಕಲ್ಯಾಣದಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಹಿಂದೆ ನಾನು ಸಚಿವನಾಗಿದ್ದಾಗ ಭೂಮಿ ಪೂಜೆ ನೆರವೇರಿಸಿದ ಹೆಮ್ಮೆ ಇದೆ ಎಂದು ತಿಳಿಸಿದರು.

ಡಾ.ಚನ್ನಬಸವ ಪಟ್ಟದ್ದೇವರು ನಾಡು ಕಂಡ ಅಪರೂಪದ ಸಂತ. ಅವರ ಹೆಸರು ಸದಾ ಸ್ಮರಣೀಯವಾಗಿಸಬೇಕೆಂಬ ಉದ್ದೇಶದಿಂದ ಹಿಂದೆ ನಾನು ಸಚಿವನಾಗಿದ್ದಾಗ ಬೀದರ್ ನ ರಂಗಮಂದಿರಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡಿಸಿದ್ದೇನೆ ಎಂದು ಹೇಳಿದರು.

ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ದಯಾನಂದ ಘೂಳೆ, ಸಂದೀಪ್ ಪಾಟೀಲ್, ರಮೇಶ ಗೌಡ, ಜಗದೀಶ್ ಪಾಟೀಲ್, ಎಂ.ಡಿ ಸಲಾವುದ್ದೀನ್, ಮಹೇಶ ಭಾಲ್ಕೆ, ಸಿದ್ರಾಮಪ್ಪ ನಿಡೋದೆ, ಕಿರಣ ಶೆಂಬೆಳ್ಳಿ, ಬಾಬು ಎಕಲಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net