ಮಂಡ್ಯ ಸಮ್ಮೇಳನದಲ್ಲಿ ದಾನಿ ಬಾಬುರಾವಗೆ ಸನ್ಮಾನ

dani baburao
Published on

ಬೀದರ್: ಸಕ್ಕರೆ ನಾಡು ಮಂಡ್ಯದಲ್ಲಿ ಆಯೋಜಿಸಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ ನಿಂದ ಜಿಲ್ಲೆಯ ನಿವೃತ್ತ ಮುಖ್ಯಗುರು ದಾನಿ ಬಾಬುರಾವ ಅವರನ್ನು ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಸನ್ಮಾನಿಸಿದರು. ಪರಿಷತ್ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಇತರರಿದ್ದರು. ಎಚ್.ಕೆಇ ಸಂಸ್ಥೆ ಪ್ರೌಢಶಾಲೆಯಲ್ಲಿ ಶಿಕ್ಷಕ, ಮುಖ್ಯಗುರುಗಳಾಗಿದ್ದ ದಾನಿ ಬಾಬುರಾವ ಅವರ ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿನ ಸೇವೆ ಪರಿಗಣಿಸಿ ಸಮ್ಮೇಳನದಲ್ಲಿ ಗೌರವಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net