

ಬೀದರ್: ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅಪಮಾನಕರ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ಆಗ್ರಹಿಸಿದ್ದಾರೆ.
ಶಾ ಅವರು ಸಂಸತ್ತಿನಲ್ಲಿ ಮಾತನಾಡುವಾಗ ಡಾ. ಅಂಬೇಡ್ಕರ್ ಅವರ ಹೆಸರು ಪ್ರಸ್ತಾಪಿಸಿ ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಡಾ. ಅಂಬೇಡ್ಕರ್ ಅವರು ಭಾರತಕ್ಕೆ ಮಾದರಿ ಸಂವಿಧಾನ ನೀಡಿದ್ದಾರೆ. ದೇಶ ಹಾಗೂ ವಿಶ್ವ ಅವರನ್ನು ಗೌರವಿಸುತ್ತಿದೆ. ಅವರ ಬಗ್ಗೆ ಗೃಹ ಸಚಿವರು ಲಘುವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರ ಹೇಳಿಕೆಯಿಂದ ದೇಶದ ಜನರ ಭಾವನೆಗೆ ಧಕ್ಕೆ ಉಂಟಾಗಿದೆ. ಕೂಡಲೇ ಅವರು ದೇಶದ ಜನರ ಕ್ಷಮೆಯಾಚಿಸಬೇಕು ಒತ್ತಾಯಿಸಿದ್ದಾರೆ.