ಮನಮೋಹನ್ ಸಿಂಗ್ ನಿಧನಕ್ಕೆ ಘಾಳೆ ಸಂತಾಪ

Prakash Ghale
Published on

ಬೀದರ್: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಜಿಲ್ಲೆಯವರೇ ಆದ ಕಾಂಗ್ರೆಸ್ ಕಿಸಾನ್, ಖೇತ್ ಮಜ್ದೂರ್ ವಿಭಾಗದ ರಾಷ್ಟ್ರೀಯ ಸಂಯೋಜಕ ಪ್ರಕಾಶ ಘಾಳೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮನಮೋಹನ್‍ಸಿಂಗ್ ಅವರು ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಿದ್ದರು. ಅಂತೆಯೇ ಅವರನ್ನು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಎಂದು ಬಣ್ಣಿಸಿದ್ದರು. ಅವರ ನಿಧನದಿಂದ ದೇಶ ಹಾಗೂ ವಿಶ್ವಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಸಿಂಗ್ ಅವರು ಪ್ರಧಾನಿಯಾಗಿದ್ದಾಗ ದೇಶದ ರೈತರ ರೂ. 72 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ದುಡಿಯುವ ಕೈಗಳಿಗೆ ಕೆಲಸ ಒದಗಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದರು. ‘ಆಧಾರ್ ಕಾರ್ಡ್’ ಅವರ ಕೊಡುಗೆ ಎಂದು ತಿಳಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net