ವಲಯಮಟ್ಟದ ಸಮಾವೇಶಕ್ಕೆ ಜಿಲ್ಲೆಯ 100 ನೌಕರರು

Vijaykumar K. Patil-1
Published on

ಬೀದರ್: ಕಲಬುರಗಿಯ ಸೇಂಟ್ ಮೇರಿ ಪಿ.ಯು. ಕಾಲೇಜಿನಲ್ಲಿ ಜ. 5 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘದ ಕಲಬುರಗಿ ವಲಯಮಟ್ಟದ ಸಮಾವೇಶದಲ್ಲಿ ಬೀದರ್ ಜಿಲ್ಲೆಯ 100 ನೌಕರರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಂಘದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಕೆ. ಪಾಟೀಲ ತಿಳಿಸಿದ್ದಾರೆ.

ಸಮಾವೇಶದಲ್ಲಿ ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ನೂತನ ಜಿಲ್ಲಾ ಘಟಕಗಳ ಉದ್ಘಾಟನೆಯೂ ಜರುಗಲಿದೆ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಪಾಟೀಲ, ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರ ಸಂಘದ ರಾಜ್ಯ ಅಧ್ಯಕ್ಷ ಡಾ. ಹರೀಶ್ ಎನ್, ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಜಂಟಿ ನಿರ್ದೇಶಕ ಶಿವಶರಣಪ್ಪ ಮುಳೆಗಾಂವ್, ಬೀದರ್ ಜಿಲ್ಲಾ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಅನುದಾನಿತ ಪದವಿಪೂರ್ವ ಕಾಲೇಜುಗಳ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶದ ಯಶಸ್ವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net