ಉನ್ನತ ತನಿಖೆಗೆ ಒತ್ತಾಯ

Published on

ಬೀದರ್: ಭಾಲ್ಕಿ ತಾಲ್ಲೂಕಿನ ಕಟ್ಟಿತೂಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಮೋನಪ್ಪ ಪಂಚಾಳ ಆತ್ಮಹತ್ಯೆ ಪ್ರಕರಣದ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಜಿಲ್ಲಾ ವಿಶ್ವಕರ್ಮ ಸಮಾಜ ಸಮಿತಿ ಆಗ್ರಹಿಸಿದೆ.

ರಾಜು ಕಪನೂರು ಹಾಗೂ ಇತರ ಎಂಟು ಜನ ಸೇರಿ ಹಣಕ್ಕಾಗಿ ಪೀಡಿಸುತ್ತಿದ್ದರು. ಕೊಲೆ ಬೆದರಿಕೆಯೂ ಇತ್ತು. ಇದರಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಡೆತ್‍ನೋಟ್ ಬರೆದಿಟ್ಟು ಸಚಿನ್ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟೆಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜದ ಗುತ್ತಿಗೆದಾರನನ್ನು ವಂಚಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವಂತಹ ಸನ್ನಿವೇಶ ಸೃಷ್ಟಿಸಲಾಗಿದೆ ಎಂದು ದೂರಿದೆ.

ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಸಮಿತಿಯ ಅಧ್ಯಕ್ಷ ಮಹೇಶ ಪಂಚಾಳ, ಕಾರ್ಯದರ್ಶಿ ವಿಶ್ವಕರ್ಮ ಶಿವಾನಂದ ಹಾಗೂ ಬಾಬುರಾವ್ ವಿಶ್ವಕರ್ಮ ಚಿಮಕೋಡ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net