ವಿಭಾಗಮಟ್ಟದ ಬ್ಯಾಸ್ಕೆಟ್‍ಬಾಲ್ ಟೂರ್ನಿ 4ರಂದು

Basketball meeting
Published on

ಬೀದರ್: ಜಿಲ್ಲಾ ಬ್ಯಾಸ್ಕೆಟ್‍ಬಾಲ್ ಅಸೋಸಿಯೇಷನ್ ಹಾಗೂ ಕರ್ನಾಟಕ ರಾಜ್ಯ ಬ್ಯಾಸ್ಕೆಟ್‍ಬಾಲ್ ಅಸೋಸಿಯೇಷನ್ ವತಿಯಿಂದ ಜ. 4 ಮತ್ತು 5 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ವಿಭಾಗಮಟ್ಟದ ಮುಕ್ತ ಬ್ಯಾಸ್ಕೆಟ್‍ಬಾಲ್ ಟೂರ್ನಮೆಂಟ್ ಹಮ್ಮಿಕೊಳ್ಳಲಾಗಿದೆ.

ಕ್ರೀಡೆಗೆ ಉತ್ತೇಜನ ನೀಡಲು ಟೂರ್ನಮೆಂಟ್ ಸಂಘಟಿಸಲಾಗಿದೆ. ಯಶಸ್ವಿಗೆ ಭರದ ಸಿದ್ಧತೆಗಳು ನಡೆದಿವೆ ಎಂದು ನಗರದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾ ಬ್ಯಾಸ್ಕೆಟ್‍ಬಾಲ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ ತಾಳಂಪಳ್ಳಿ ತಿಳಿಸಿದರು.

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಉದ್ಘಾಟಿಸಲಿದ್ದಾರೆ. ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ವಿಜೇತ ತಂಡಗಳಿಗೆ ಟ್ರೋಫಿ ವಿತರಿಸಲಿದ್ದಾರೆ. ಡಾ.ಎಸ್.ಎಸ್. ಸಿದ್ದಾರೆಡ್ಡಿ ಫೌಂಡೇಷನ್ ಅಧ್ಯಕ್ಷೆ ಗುರಮ್ಮ ಸಿದ್ದಾರೆಡ್ಡಿ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ  ಪ್ರಶಾಂತ ದೊಡ್ಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಬೀದರ್, ಬಳ್ಳಾರಿಯ ತಲಾ ಎರಡು ಹಾಗೂ ಕಲಬುರಗಿಯ ಮೂರು ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಶಿವಕುಮಾರ ಹೇಳಿದರು.

ಟೂರ್ನಿ ಕ್ರೀಡಾಪಟುಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಲಿದೆ ಎಂದು ನಗರಸಭೆ ಸದಸ್ಯ ರಾಜಾರಾಮ ಹೇಳಿದರು.

ಟೂರ್ನಿಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದು ಅಸೋಸಿಯೇಷನ್ ಸದಸ್ಯೆ ಮಂಗಲಾ ಭಾಗವತ್ ಮನವಿ ಮಾಡಿದರು.

ಕ್ರೀಡಾಪಟುಗಳಾದ ಎಸ್.ಎಸ್. ಭಟ್ಟ ಲೋಕೇಶ್ವರ, ಜಾನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net