

ಬೀದರ್: ಮಹಾಯೋಗಿ ವೇಮನ ಜಯಂತಿ ಆಚರಣೆ ಪ್ರಯುಕ್ತ ಜಿಲ್ಲಾ ರೆಡ್ಡಿ ಸಮಾಜದ ವತಿಯಿಂದ ನಗರದ ಅಮಲಾಪುರ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ಜನವರಿ 5 ರಂದು ಬೆಳಿಗ್ಗೆ 10ಕ್ಕೆ ಪೂರ್ವಭಾವಿ ಸಿದ್ಧತಾ ಸಭೆ ಕರೆಯಲಾಗಿದೆ.
ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಅಧ್ಯಕ್ಷತೆ ವಹಿಸುವರು. ಸಮಾಜ ಬಾಂಧವರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜ. 19 ರಂದು ಅರ್ಥಪೂರ್ಣ ಜಯಂತಿ ಆಚರಣೆಗೆ ತಮ್ಮ ಸಲಹೆ ನೀಡಬೇಕು ಎಂದು ಜಿಲ್ಲಾ ರೆಡ್ಡಿ ಸಮಾಜದ ಪ್ರಧಾನ ಕಾರ್ಯದರ್ಶಿ ಕೆ. ಗೋಪಾಲ್ ರೆಡ್ಡಿ ಮನವಿ ಮಾಡಿದ್ದಾರೆ.