ವ್ಯಸನಮುಕ್ತ ಸಮಾಜ ನಿರ್ಮಿಸಲು ಶ್ರಮಿಸಿ

dharmasthala Meeting
????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಬೀದರ್: ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸಿ ವ್ಯಸನಮುಕ್ತ ಸಮಾಜ ನಿರ್ಮಿಸಲು ಶ್ರಮಿಸಬೇಕು ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ವಿರೂಪಾಕ್ಷ ಗಾದಗಿ ಹೇಳಿದರು.

ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರ ಸಭೆ ಉದ್ಘಾಟಿಸಿದ ಅವರು, ಮೂರು ತಿಂಗಳಿಗೊಮ್ಮ ಜಿಲ್ಲಾ ಕೇಂದ್ರದಲ್ಲಿ ಜರುಗುವ ಸಭೆಯಲ್ಲಿ ಕಡ್ಡಾಯವಾಗಿ ವೇದಿಕೆ ಸದಸ್ಯರು ಭಾಗವಹಿಸಿ ಸಲಹೆ ನೀಡಬೇಕು ಎಂದರು.

ಸ್ವಾತಂತ್ರ್ಯ ಪೂರ್ವ ನೂರಕ್ಕೆ ಮೂವರು ಮಾತ್ರ ದುಶ್ಚಟಗಳಿಗೆ ಬಲಿಯಾಗುತ್ತಿದ್ದರೆ, ಇದೀಗ ನೂರಕ್ಕೆ 90 ಮಂದಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರಿಂದ ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಅರ್ಥಪೂರ್ಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ವೇದಿಕೆ ಜಿಲ್ಲಾ ಉಪಾಧ್ಯಕ್ಷ ಶಿವು ಲೋಖಂಡೆ, ಸೋಮನಾಥಪ್ಪ ಅಷ್ಟೂರೆ, ರಾಜಕುಮಾರ ಪಸಾರ, ಸಂತೋಷ ಪಾಟೀಲ್, ಮಲ್ಲಪ್ಪ ಗೌಡ, ಮಡಿವಾಳಪ್ಪ, ಬಸವರಾಜ ಅಷ್ಟಗಿ, ಸಂಗಮೇಶ ಜವಾದಿ, ಮಂಗಲಾ ಭಾಗವತ್, ಪ್ರತಿಭಾ ಚಾಮಾ, ಗುರುನಾಥ ರಾಜಗೀರಾ, ಸಂತೋಷ ಚಿಟಗುಪ್ಪ, ಬಸವರಾಜ ಬಶೆಟ್ಟಿ ಇತರರಿದ್ದರು. ಧರ್ಮೇಂದ್ರ ಸ್ವಾಗತಿಸಿದರು. ಸಂಜಯ ನಾಯಕ್ ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net