

ಹುಮನಾಬಾದ್: ಸರ್ಕಾರದ ಅನುದಾನದಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ವರದಿ ಪಡೆದು ಕಳಪೆ ಕಂಡುಬಂದಲ್ಲಿ ಸಂಬಂಧಿತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪಟ್ಟಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಪ್ರತಕರ್ತರೊಂದಿಗೆ ಮಾತನಾಡಿದ ಅವರು, ಶಾಮತಾಬಾದ್-ಚಿಟಗುಪ್ಪ ರಸ್ತೆ ಕಾಮಗಾರಿ ಕಳಪೆ ಸೇರಿ ಇತರ ಮಾರ್ಗಗಳ ಸ್ಥಿತಿಗತಿ ಬಗ್ಗೆ ಎಂಎಲ್ಸಿ ಭೀಮರಾವ ಪಾಟೀಲ್ ಅವೇಶನದಲ್ಲಿ ದೂರಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಳಪೆ ಸೇರಿ ಕಾಮಗಾರಿ ಪರಿಪೂರ್ಣಗೊಂಡಿಲ್ಲ. ಅಕಾರಿಗಳಿಂದ ತನಿಖೆ ನಡೆಸಿ ಮಾಹಿತಿ ಪಡೆದು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ರಾಜಶೇಖರ ಪಾಟೀಲ್ ಶಾಸಕ, ಸಚಿವರಾಗಿ ಜನಸೇವೆ ಮಾಡಿದ್ದಾರೆ. ಪಕ್ಷ ಸಂಘಟನೆಯಲ್ಲಿ ಸಾಕಷ್ಟು ಅನುಭವ ಹೊಂದಿದ್ದರಿಂದ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸುವೆ ಎಂದರು.
ಮಾಜಿ ಸಚಿವ ರಾಜಶೇಖರ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಪಂ ಮಾಜಿ ಸದಸ್ಯ ವೀರಣ್ಣ ಪಾಟೀಲ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ ಪಾಟೀಲ್, ಕಲಬುರಗಿ-ಬೀದರ್, ಯಾದಗಿರಿ ಹಾಲು ಒಕ್ಕೂಟದ ನಿದರ್ೇಶಕ ರೇವಣಸಿದ್ದಪ್ಪ ಪಾಟೀಲ್, ಪುರಸಭೆ ಅಧ್ಯಕ್ಷೆ ಪಾರ್ವತಿಬಾಯಿ ಶೇರಿಕಾರ, ಉಪಾಧ್ಯಕ್ಷ ಮುಕ್ರಂ ಜಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರ್ ಮಿಯ್ಯಾ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಓಂಕಾರ ತುಂಬಾ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ, ಪ್ರಮುಖರಾದ ಬಾಬು ಟೈಗರ್, ಮಲ್ಲಿಕಾರ್ಜುನ ಮಹೇಂದ್ರಕರ್, ವೀರಪ್ಪ ಧುಮ್ಮನಸೂರ, ಸುರೇಶ ಘಾಂಗ್ರೆ ಇತರರಿದ್ದರು.