ಸಮಾಜದ ಹಿತಕ್ಕಾಗಿ ದುಡಿಯಿರಿ

Lingayat Noukarar Sangh
Published on

ಬೀದರ್: ಸಂಘ ಸಂಸ್ಥೆಗಳ ಪದಾಧಿಕಾರಿಗಳು ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಮರೆತು ಸಮಾಜದ ಹಿತಕ್ಕಾಗಿ ದುಡಿಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ. ಹಳ್ಳದ್ ನುಡಿದರು.

ಭಾಲ್ಕಿ ಪಟ್ಟಣದ ಅನುಭವ ಯೋಗ ಕೇಂದ್ರದಲ್ಲಿ ನಡೆದ ಲಿಂಗಾಯತ ನೌಕರರ ಸಂಘದ ತಾಲ್ಲೂಕು ಘಟಕದ 2024-25ನೇ ಸಾಲಿನ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಲಿಂಗಾಯತ ನೌಕರರ ಸಂಘ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ ಎಂದು ತಿಳಿಸಿದರು.

ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಬಸವಣ್ಣನವರ ಕಾಯಕ, ದಾಸೋಹ ತತ್ವ ಅಳವಡಿಸಿಕೊಂಡಲ್ಲಿ ಸಂಸ್ಥೆಗಳ ಬೆಳವಣಿಗೆ ಆಗುತ್ತದೆ ಎಂದು ಹೇಳಿದರು.

ಲಿಂಗಾಯತ ನೌಕರರ ಹಿತಕ್ಕಾಗಿ ಸಂಘ ಸ್ಥಾಪಿಸಲಾಗಿದೆ. ಸಂಘ ಯಾವುದೇ ಸಂಘಕ್ಕೆ ಪರ್ಯಾಯವಲ್ಲ. ನೌಕರರ ಹಿತರಕ್ಷಣೆಯೇ ಸಂಘದ ಧ್ಯೇಯವಾಗಿದೆ ಎಂದು ಲಿಂಗಾಯತ ನೌಕರರ ಸಂಘದ ರಾಜ್ಯ ಅಧ್ಯಕ್ಷ ಶಿವರಾಜ ಕಪಲಾಪುರೆ ತಿಳಿಸಿದರು.

ಸಂಘ 2018 ರಿಂದ ರಾಜ್ಯದ ಸಮಾಜದ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುತ್ತಿದೆ ಎಂದು ಹೇಳಿದರು.

ಸಂಘದ ತಾಲ್ಲೂಕು ಅಧ್ಯಕ್ಷ ಬಸವರಾಜ ಬಡದಾಳೆ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ದಾನಾ, ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಲಿಂಗಾಯತ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿಲೀಪಕುಮಾರ ಡೊಂಗರಗೆ, ಪ್ರಿಯಾ ಓಂಪಾಟೀಲ, ಶರಣಪ್ಪ ಬಿರಾದಾರ, ಸಂತೋಷಕುಮಾರ ವಾಡೆ, ಸೂರ್ಯಕಾಂತ ಸುಂಟೆ, ಶಿವಕುಮಾರ ಫುಲಾರಿ ಇದ್ದರು. ಲಿಂಗಾಯತ ನೌಕರರ ಸಂಘದ ಜಿಲ್ಲಾ, ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಹಾಗೂ ಲಿಂಗಾಯತ ನೌಕರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net