ಕುಂದುಕೊರತೆ ಬಗೆಹರಿಸುವೆ

dc office meeting
Published on

ಬೀದರ್: ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಸಲ್ಲಿಸಿದ ಮನವಿಗಳನ್ನು ಪರಿಶೀಲಿಸಿ ಎಲ್ಲ ಕುಂದುಕೊರತೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಯತ್ನಿಸುವುದಾಗಿ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಅಧ್ಯಕ್ಷ ಇಕ್ಬಾಲ್ ಸಿಂಗ್ ಲಾಲಪುರಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಅಲ್ಪಸಂಖ್ಯಾತರ ಸಮುದಾಯದ ಮುಖಂಡರ ಸಭೆ ನಡೆಸಿದ ಅವರು, ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ ಮತ್ತು ಪಾರ್ಸಿ ಜನಾಂಗದವರಿಗೆ ಅನೇಕ ಸೌಲಭ್ಯಗಳಿದ್ದು, ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಭಾರತವು ಪ್ರಪಂಚದಲ್ಲೇ ಸಹಿಷ್ಣುತೆ ಹೊಂದಿರುವ ಏಕೈಕ ದೇಶ. ನಾವೆಲ್ಲರೂ ಒಂದಾಗಿ ಸುರಕ್ಷಿತರಾಗಿ ದೇಶದ ಏಳಿಗೆ ಬಗ್ಗೆ ವಿಚಾರ ಮಾಡಿದರೆ ಅಭಿವೃದ್ಧಿ ಆಗುವುದರಲ್ಲಿ ಸಂಶಯವಿಲ್ಲ. ಅಲ್ಪಸಂಖ್ಯಾತರಿಗೆ ಎಲ್ಲ ಹಂತಗಳಲ್ಲಿ ಸ್ಥಾನಮಾನ ಸಿಗುತ್ತಿದ್ದು, ಪ್ರಾಮಾಣಿಕ, ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ರೌಫೊದ್ದೀನ್ ಕಚೇರಿವಾಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net