ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ

dc office meeting
Published on

ಬೀದರ್: ರಾಷ್ಟ್ರೀಯ ಮತದಾರರ ದಿನ ನಿಮಿತ್ತ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಮತಪಟ್ಟಿಯಲ್ಲಿ ಹೆಸರು ಸೇರಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವ ಸಿದ್ಧತೆ ಸಭೆ ನಡೆಸಿದ ಅವರು, ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳು ವೋಟ್ ಆ್ಯಪ್ ಡೌನ್ ಲೋಡ್ ಮಾಡಿಕೊಂಡು ಅದರಲ್ಲಿ ಹೆಸರು ಸೇರಿಸಬೇಕು ಎಂದರು.

ಜ.25ರಂದು ನಗರದ ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಮತದಾರರ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಸಹಾಯಕ ಆಯುಕ್ತ ಎಂ.ಡಿ. ಶಕೀಲ್, ರಾಜ್ಯ ಮಟ್ಟದ ಚುನಾವಣೆ ತರಬೇತುದಾರ ಡಾ.ಗೌತಮ ಅರಳಿ, ಡಿಡಿಪಿಯು ಚಂದ್ರಕಾಂತ ಶಾಬಾದಕರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಲೀಮ್ ಪಾಶಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net