ತಾಂದಳೆ ಕ್ಲಿಕ್ಕಿಸಿದ ಫೋಟೋ ಪ್ರದರ್ಶನ

Gopi tandale
Published on

ಬೀದರ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಮಟ್ಟದ ಸಮ್ಮೇಳನ ನಿಮಿತ್ತ ತುಮಕೂರಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನದಲ್ಲಿ ಜಿಲ್ಲೆಯ ಹಿರಿಯ ಛಾಯಾಗ್ರಾಹಕ ಗೋಪಿಚಂದ ತಾಂದಳೆ ಕ್ಲಿಕ್ಕಿಸಿದ ಫೋಟೋ ಗಮನಸೆಳೆಯಿತು.

ಬೀದರ್ನಲ್ಲಿ ಗುರುನಾನಕ್ ಜಯಂತಿ ಅಂಗವಾಗಿ ನಡೆದ ಖಡ್ಗ ಪ್ರದರ್ಶನ ಚಿತ್ರದ ಬಗ್ಗೆ ನೋಡುಗರು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net