ಬಸವ ಮೂರ್ತಿ ವಿರೂಪಕ್ಕೆ ಆಕ್ರೋಶ

protest
Published on

ಬೀದರ್: ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿಯ ಬಸವಣ್ಣನವರ ಮೂರ್ತಿ ವಿರೂಪಗೊಳಿಸಿದ್ದನ್ನು ಖಂಡಿಸಿ ನಗರದಲ್ಲಿ ಬಸವಪರ ಸಂಘಟನೆಗಳಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಮಠಾಧೀಶರು ಮತ್ತು ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಬಸವ ಭಕ್ತರು ಅಲ್ಲಿಂದ ಪ್ರಮುಖ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ರ್ಯಾಲಿ ಮೂಲಕ ಆಗಮಿಸಿ, ಮೂರ್ತಿ ವಿರೂಪಗೊಳಿಸಿದ ದುಷ್ಕರ್ಮಿಗಳನ್ನು ಬಂಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕೃತ್ಯವು ನಾಡಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮೌಲ್ಯಗಳನ್ನು ಧಕ್ಕೆ ಮಾಡಿದೆ ಹಾಗೂ ಸಮಾಜದ ಭಾವನೆಗಳನ್ನು ಆಘಾತಕ್ಕೊಳಪಡಿಸಿದೆ ಎಂದು ತಿಳಿಸಿದ್ದಾರೆ.

ಪ್ರಕರಣವನ್ನು ಸರ್ಕಾರ ಗಂಭೀರತೆಯಿಂದ ಪರಿಗಣಿಸಿ, ಈ ಕೃತ್ಯದಲ್ಲಿ ತೊಡಗಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂಥ ಕೃತ್ಯಗಳು ಮತ್ತೆ ನಡೆಯದಂತೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.

ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಪೂಜ್ಯ ಡಾ.ಗಂಗಾಂಬಿಕೆ ಅಕ್ಕ, ಲಿಂಗಾಯತ ಮಹಾಮಠದ ಶ್ರೀ ಪ್ರಭುದೇವ ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಬಸವರಾಜ ಧನ್ನೂರ, ಭಾರತೀಯ ಬಸವ ಬಳಗದ ರಾಜ್ಯಾಧ್ಯಕ್ಷ ಬಾಬು ವಾಲಿ, ರಾಷ್ಟ್ರೀಯ ಬಸವ ದಳ ಜಿಲ್ಲಾಧ್ಯಕ್ಷ ಸೋಮಶೇಖರ ಪಾಟೀಲ್ ಗಾದಗಿ, ಬಸವ ಕೇಂದ್ರ ಜಿಲ್ಲಾಧ್ಯಕ್ಷ ಶರಣಪ್ಪ ಮಿಠಾರೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಪ್ರಮುಖರಾದ ಶಕುಂತಲಾ ಬೆಲ್ದಾಳೆ, ಸುವರ್ಣಾ ಚಿಮಕೊಡ, ಕರುಣಾ ಎಸ್., ಶೋಭಾ ಚಾಂಗಲೇರಾ, ಶೋಭಾ, ವೀರಶೆಟ್ಟಿ ಪಾಟೀಲ್, ವಿವೇಕ ಧನ್ನೂರ, ಸುಶೀಲಮ್ಮ, ಸುರೇಶ ಚನ್ನಶೆಟ್ಟಿ, ರೇವಣಪ್ಪ ಮೂಲಗೆ, ಶಿವರಾಜ ಮದಕಟ್ಟಿ, ಬಸವರಾಜ ಪಾಟೀಲ್ ಹಾರೂರಗೇರಿ, ದಾನಿ ಬಾಬುರಾವ, ಬಸವರಾಜ ಭತಮುರ್ಗೆ, ಪೀರಪ್ಪ ಯರನಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net