ದೇಶ ಭಕ್ತರಿಗೆ ಪ್ರೇರಣೆಯಾಗಿದ್ದ ಬೋಸ್

Arunodaya School - Copy
Published on

ಬೀದರ್: ಬ್ರಿಟಿಷರ ವಿರುದ್ಧ ವೀರಾವೇಶದಿಂದ ಹೋರಾಡಿದ್ದ ಸುಭಾಷ್ ಚಂದ್ರ ಬೋಸ್ ದೇಶ ಭಕ್ತರಿಗೆ ಪ್ರೇರಣೆಯಾಗಿದ್ದರು ಎಂದು ಸಂಸ್ಕಾರ ಕಾಲೇಜು ಪ್ರಾಚಾರ್ಯ ಮಲ್ಲಿನಾಥ ಮಠಪತಿ ಹೇಳಿದರು.

ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ನಿಮಿತ್ತ ಭಾರತೀಯ ಶಿಕ್ಷಣ ಮಂಡಲದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಅರುಣೋದಯ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪರಾಕ್ರಮ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧಿಜಿ ಜತೆಗೂಡಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದರು ಎಂದು ತಿಳಿಸಿದರು.

ಯುವಕರು ಬೋಸ್ ಅವರ ಶೌರ್ಯ ಹಾಗೂ ಜೀವನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಬೋಸ್ ಅವರು ‘ನಿಮ್ಮ ರಕ್ತ ನನಗೆ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುವೆ’ ಎಂದು ಹೇಳಿದ್ದರು. ಸ್ವಾತಂತ್ರ್ಯ ಹೋರಾಟಕ್ಕಾಗಿಯೇ ಆಜಾದ್ ಹಿಂದ್ ಫೌಜ್ ಸ್ಥಾಪಿಸಿದ್ದರು ಎಂದು

ಅಧ್ಯಕ್ಷತೆ ವಹಿಸಿದ್ದ ಭಾರತೀಯ ಶಿಕ್ಷಣ ಮಂಡಲದ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷಕುಮಾರ ಮಂಗಳೂರೆ ನುಡಿದರು.

ಬೋಸ್ ಸ್ವಾಮಿ ವಿವೇಕಾನಂದರಿಂದ ಪ್ರಭಾವಿತರಾಗಿದ್ದರು ಎಂದು ತಿಳಿಸಿದರು.

ಭಾರತೀಯ ಸಂಸ್ಕøತಿ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ವಿದ್ಯಾರಣ್ಯ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಪ್ರತಿಭಾ ಚಾಮಾ, ಜೀಜಾಮಾತಾ ಕನ್ಯಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಪರಮೇಶ್ವರ ಬಿರಾದಾರ, ಪತಂಜಲಿ ಯೋಗ ಸಮಿತಿಯ ಜಿಲ್ಲಾ ಅಧ್ಯಕ್ಷ ಯೋಗೇಂದ್ರ ಯದಲಾಪುರೆ ಉಪಸ್ಥಿತರಿದ್ದರು. ಜ್ಯೋತಿ ಸಂಗೋಳಗಿ ಸ್ವಾಗತಿಸಿದರು. ಅಲ್ಕಾವತಿ ಹೊಸದೊಡ್ಡಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net