ಜ್ಞಾನ ಕಾರಂಜಿ ಟ್ರಸ್ಟ್ ಅಧ್ಯಕ್ಷ ಗೋರನಾಳೆಗೆ ಪ್ರಶಸ್ತಿ

Manikappa Gornale
Published on

ಬೀದರ್: ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಶಾಲೆಗಳನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಜ್ಞಾನ ಕಾರಂಜಿ ಟ್ರಸ್ಟ್ ಅಧ್ಯಕ್ಷ ಮಾಣಿಕಪ್ಪ ಗೋರನಾಳೆ ಅವರಿಗೆ ಜಿಲ್ಲಾ ಆಡಳಿತದಿಂದ ನೀಡಲಾಗುವ ಪ್ರಸಕ್ತ ಸಾಲಿನ ಗಣರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಬೀದರ್‍ನಲ್ಲಿ ನಡೆದ ಗಣರಾಜೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಗೋರನಾಳೆ ಜ್ಞಾನ ಕಾರಂಜಿ ಚಾರಿಟಬಲ್ ಟ್ರಸ್ಟ್ ಸಂಸ್ಥಾಪಕರಾಗಿದ್ದಾರೆ. ಟ್ರಸ್ಟ್ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ 27 ಕನ್ನಡ ಮಾಧ್ಯಮ ಶಾಲೆಗಳು ನಡೆಯುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net