

ಬೀದರ್: ವಿಶ್ವದಲ್ಲಿಯೇ ವಿವಿಧತೆಯಲ್ಲಿ ಏಕತೆಯಿರುವ ಏಕೈಕ ದೇಶ ಭಾರತ. ಜಗತ್ತಿಗೆ ಮಾದರಿಯಾಗುವಂಥ ಸಂವಿಧಾನವನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದಾರೆ ಎಂದು ಕೆಪಿ ವಿದ್ಯಾ ಸಂಸ್ಥೆ ಅಧ್ಯಕ್ಷ ಬಾಬು ವಾಲಿ ಹೇಳಿದರು.
ಇಲ್ಲಿನ ಕೆಪಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಮಾಜದ ಕಟ್ಟಕಡೆಯ ಮನುಷ್ಯನಿಗೂ ತಲುಪುವ ಸಂವಿಧಾನ ನಮ್ಮದು. ಅದನ್ನು ಉಳಿಸಿಕೊಂಡು ಹೋಗುವ ಜವಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ಯಕಾ ಪರಮೇಶ್ವರಿ ಶಾಲೆಯ ಹಳೆಯ ವಿದ್ಯಾರ್ಥಿಗಳ ವೆಬ್ ಸೈಟ್ ಬಿಡುಗಡೆಗೊಳಿಸಲಾಯಿತು. ಸಂಸ್ಥೆ ಉಪಾಧ್ಯಕ್ಷ ಮಲ್ಲಯ್ಯ ಸ್ವಾಮಿ, ಸದಸ್ಯರಾದ ಡಾ.ಸಂತೋಷ ಬಾಲೋಡೆ, ರವಿ ದುರ್ಗೆ, ಪ್ರೌಢ ಶಾಲೆ ಮುಖ್ಯಗುರು ವಿಜಯಕುಮಾರ ಪಾಟೀಲ್ ಯರನಳ್ಳಿ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.