

ಬೀದರ್: ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಅರಿಯಬೇಕು ಎಂದು ಶ್ರೀಗುರು ಪಬ್ಲಿಕ್ ಸ್ಕೂಲ್ ಅಧ್ಯಕ್ಷ ನರಸಾರೆಡ್ಡಿ ಹೇಳಿದರು.
ನಗರದ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಅರಿವು ಸೇವಾ ಸಂಸ್ಥೆ ವತಿಯಿಂದ ಈಚೆಗೆ ನಡೆದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿವೇಕಾನಂದರು ಮಹಾ ಜ್ಞಾನಿ ಆಗಿದ್ದರು. ಅವರ ಭಾಷಣವನ್ನು ವಿಶ್ವವೇ ಮೆಚ್ಚಿಕೊಂಡಿತು ಎಂದು ತಿಳಿಸಿದರು.
ಸ್ವಾಮಿ ವಿವೇಕಾನಂದ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಅರಿವು ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಶಾಂತ ವಿಶ್ವಕರ್ಮ ಹೇಳಿದರು.
ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ, ಸಂಸ್ಥೆಯ ಗೌರವಾಧ್ಯಕ್ಷ ವಿನೋದ ಹೊನ್ನಾ, ಕಾರ್ಯದರ್ಶಿ ರಾಜಕುಮಾರ ಸ್ವಾಮಿ ಬಂಪಳ್ಳಿ, ಸದಸ್ಯ ಶಿವಾನಂದ ಗೋರ್ಟಾ ಮತ್ತಿತರರು ಇದ್ದರು. ಅಲ್ಕಾವತಿ ಹೊಸದೊಡ್ಡೆ ನಿರೂಪಿಸಿದರು.