ಸಿಇಒ ಡಾ.ಬದೋಲೆಗೆ ಸನ್ಮಾನ

Zp CEO Sanman- PDO Sangh
Published on

ಬೀದರ್: 2024-25ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿಗೆ ಭಾಜನರಾದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರನ್ನು ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ ಗ್ರೇಡ್) ಹುದ್ದೆ ಉನ್ನತೀಕರಣ ಸಂಘದಿಂದ ನಗರದಲ್ಲಿ ಸನ್ಮಾನಿಸಲಾಯಿತು.

ಸಂಘದ ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಉಮೇಶ ಜಾಬಾ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಭುದಾಸ್ ಜಾಧವ್, ಮಾಳೆಗಾಂವ್ ಪಿಡಿಒ ಅನಿಲಕುಮಾರ ಚಿಟ್ಟಾ, ಮಳಚಾಪುರ ಪಿಡಿಒ ಶಿವಶೆಟ್ಟಿ ಸೀತಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net