ಬಿಜೆಪಿ ರಾಜ್ಯ ಪರಿಷತ್ ಸದಸ್ಯ ರಾಜರಡ್ಡಿ

Rajraddy shabad
Published on

ಬೀದರ್: ಬಿಜೆಪಿಯ ರಾಜ್ಯ ಪರಿಷತ್ ಸದಸ್ಯರಾಗಿ ಬೀದರ್ ಜಿಲ್ಲೆಯಿಂದ ರಾಜರಡ್ಡಿ ಶಾಬಾದ್ ಅವರನ್ನು ಆಯ್ಕೆ ಮಾಡಲಾಗಿದೆ. ಇಲ್ಲಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಶಾಬಾದ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಜಿಲ್ಲಾ ಸಹ ಚುನಾವಣಾಧಿಕಾರಿ ಶಿವರಾಜ ಗಂದಗೆ ಅವಿರೋಧ ಆಯ್ಕೆ ಘೋಷಣೆ ಮಾಡಿದರು. ತಾಲೂಕಿನ ಔರಾದ್ (ಎಸ್) ನಿವಾಸಿಯಾದ ರಾಜರಡ್ಡಿ ಅವರು ಪಕ್ಷದಲ್ಲಿ ಜಿಲ್ಲಾ ಉಪಾಧ್ಯಕ್ಷ, ದಕ್ಷಿಣ ಮಂಡಲ ಅಧ್ಯಕ್ಷ ಸೇರಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net