ಬೊಮ್ಮಗೊಂಡೇಶ್ವರ ಉತ್ಸವ: ಪೂರ್ವಭಾವಿ ಸಭೆ 2ರಂದು

Santosh Joldapke - Copy
Published on

ಬೀದರ್: ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದಿಂದ ನಗರದ ಗಾಂಧಿಗಂಜ್‍ನ ಕನಕ ಭವನದಲ್ಲಿ ಫೆ. 2 ರಂದು ಬೆಳಿಗ್ಗೆ 11ಕ್ಕೆ ಮಹಾತ್ಮ ಬೊಮ್ಮಗೊಂಡೇಶ್ವರ ಉತ್ಸವದ ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಭೆಯಲ್ಲಿ ಬೊಮ್ಮಗೊಂಡೇಶ್ವರ ಉತ್ಸವದ ಅರ್ಥಪೂರ್ಣ ಆಯೋಜನೆ ಕುರಿತು ಚರ್ಚೆ ನಡೆಸಲಾಗುವುದು. ಉತ್ಸವದ ದಿನಾಂಕ ಪ್ರಕಟಿಸಲಾಗುವುದು ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ ಜೋಳದಾಪಕೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಖಜಾಂಚಿಯಾಗಿ ಆಯ್ಕೆಯಾದ ದೇವಪ್ಪ ಎಂ. ಚಾಂಬೋಳೆ ಅವರನ್ನು ಅಭಿನಂದಿಸಲಾಗುವುದು ಎಂದು ಹೇಳಿದ್ದಾರೆ.

ಗೊಂಡ ಸಮಾಜದ ಮುಖಂಡರು, ಗೊಂಡ ಪರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡು, ಉತ್ಸವದ ಯಶಸ್ವಿಗೆ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net