ಸರ್ವ ಸ್ಪರ್ಶಿ ಬಜೆಟ್

Revansidda Jadar-1
Published on

ಬೀದರ್: ಕೇಂದ್ರ ಸರ್ಕಾರದ 2025-26ನೇ ಸಾಲಿನ ಬಜೆಟ್ ಸರ್ವ ಸ್ಪರ್ಶಿ, ಸರ್ವ ವ್ಯಾಪಿ ಬಜೆಟ್ ಆಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಿರಿಯ ಮುಖಂಡ ರೇವಣಸಿದ್ದ ಜಾಡರ್ ಬಣ್ಣಿಸಿದ್ದಾರೆ.

ಬಜೆಟ್‍ನಲ್ಲಿ ಪ್ರತಿಯೊಂದು ಕ್ಷೇತ್ರದ ಹಿತ ಕಾಯಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಜ್ಞಾನ ಭಾರತ ಯೋಜನೆ, ಶಾಲೆಗಳಿಗೆ ಹೈಟೆಕ್ ಎ1 ಯೋಜನೆ, ರಾಷ್ಟ್ರೀಯ ಕೌಶಲ ಕೇಂದ್ರಗಳ ಸ್ಥಾಪನೆ, ಐಐಟಿ, ಮೆಡಿಕಲ್ ಕಾಲೇಜುಗಳ ಪ್ರವೇಶ ಸಂಖ್ಯೆ ಹೆಚ್ಚಳ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟು ಮಾಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net