ಮಹಾ ಕುಂಭ ಮೇಳಕ್ಕೆ ವಿಶೇಷ ರೈಲು: ಸಂತಸ

Dattu Mulge
Published on

ಬೀದರ್: ಸಂಸದ ಸಾಗರ್ ಖಂಡ್ರೆ ಅವರು ಮಹಾ ಕುಂಭ ಮೇಳಕ್ಕೆ ಬೀದರ್‍ನಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಿಸಿದ್ದಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಸಂತಸ ವ್ಯಕ್ತಪಡಿಸಿದ್ದಾರೆ.

ವಿಶೇಷ ರೈಲುಗಳಿಂದ ಉತ್ತರಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ತೆರಳುವ ಬೀದರ್ ಲೋಕಸಭಾ ಕ್ಷೇತ್ರದ ಭಕ್ತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ರೈಲ್ವೆ ಇಲಾಖೆಯಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಿಸಿದ್ದಕ್ಕೆ ಸಂಸದರಿಗೆ ಧನ್ಯವಾದ ಅರ್ಪಿಸಿರುವ ಅವರು, ವಿಶೇಷ ರೈಲು ಸದುಪಯೋಗ ಪಡೆಯುವಂತೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net