

ಬಸವಕಲ್ಯಾಣ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 8ನೇ ಸಲ ಮಂಡಿಸಿದ ಐತಿಹಾಸಿಕ ಬಜೆಟ್ ಜನಸಾಮಾನ್ಯರು, ಬಡವರು ಮತ್ತು ರೈತರ ಏಳಿಗೆಗೆ ಒತ್ತು ನೀಡಿದೆ ಎಂದು ಧನ್ನೂರ (ಆರ್) ಗ್ರಾಮ ಪಂಚಾಯಿತಿ ಸದಸ್ಯ ರಾಚಣ್ಣ ಸಾಹು ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಭಾರತವನ್ನು ವಿಶ್ವದ ಮುಂಚೂಣಿ ರಾಷ್ಟ್ರವಾಗಿಸುವ ಸಂಕಲ್ಪದೊಂದಿಗೆ ಕೆಲಸ ಮಾಡುತ್ತಿದ್ದು, ಶಿಕ್ಷಣ, ಕೃಷಿ, ಕೈಗಾರಿಕೆ, ವೈದ್ಯಕೀಯ, ಪ್ರವಾಸೋದ್ಯಮ ಸೇರಿ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ 3.0 ಆಡಳಿತದ ಬಜೆಟ್ ಸರ್ವವ್ಯಾಪಿ ಮತ್ತು ಸರ್ವಸ್ಪರ್ಶಿಯಾಗಿದೆ. ಆದಾಯ ತೆರಿಗೆ ಮಿತಿಯನ್ನು 12 ಲಕ್ಷ ರೂ.ಗೆ ಹೆಚ್ಚಿಸಿದ್ದು ಸೇರಿ ಹಲವು ಐತಿಹಾಸಿಕ ತೀರ್ಮಾನ ಕೈಗೊಂಡು ಮಧ್ಯಮ ವರ್ಗಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಇದು ಅರ್ಥ ಕ್ರಾಂತಿಗೆ ಹೊಸ ಮುನ್ನುಡಿ ಬರೆಯುವ ಜತೆಗೆ ವಿಕಸಿತ, ಆತ್ಮನಿರ್ಭರ ಭಾರತಕ್ಕೆ ಭದ್ರ ಬುನಾದಿ ಹಾಕಲಿದೆ ಎಂದು ಹೇಳಿದ್ದಾರೆ.