ಪುನೀತ್ ಸ್ಮರಣಾರ್ಥ ರಂಗೋಲಿ ಸ್ಪರ್ಧೆ 8ಕ್ಕೆ

Narsappa Janaknoor - Copy
Published on

ಬೀದರ್: ನಟ ಪುನೀತ್ ರಾಜಕುಮಾರ ಸ್ಮರಣಾರ್ಥ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಫೆ. 8 ರಂದು ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.45 ರ ವರೆಗೆ ಸ್ಪರ್ಧೆ ನಡೆಯಲಿದೆ ಎಂದು ಸ್ಪರ್ಧೆಯ ಆಯೋಜಕ, ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಜಾನಕನೋರ ತಿಳಿಸಿದ್ದಾರೆ.

ಪ್ರತಿ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ ಇದೆ. ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಕೊಡಲಾಗುವುದು ಎಂದು ಹೇಳಿದ್ದಾರೆ.

ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9008066376 ಅಥವಾ 7411124053ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net