ಪರ ಭಾಷೆಯಲ್ಲಿ ಜಾಹೀರಾತು ಫಲಕ: ಕ್ರಮಕ್ಕೆ ಕರವೇ ಆಗ್ರಹ

Somnath Mudhool - Copy
Published on

ಬೀದರ್: ನಗರದಲ್ಲಿ ನಿಯಮ ಉಲ್ಲಂಘಿಸಿ ಪರ ಭಾಷೆಯಲ್ಲಿ ಜಾಹೀರಾತು ಫಲಕ ಅಳವಡಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಆಗ್ರಹಿಸಿದ್ದಾರೆ.

ಮೇಲುಗಡೆ ಶೇ 60 ರಷ್ಟು ಭಾಗದಲ್ಲಿ ಕನ್ನಡ ಬಳಸಬೇಕೆಂಬ ಸರ್ಕಾರದ ನಿಯಮವನ್ನು ಕೆಲ ಶಿಕ್ಷಣ ಸಂಸ್ಥೆಗಳು ಗಾಳಿಗೆ ತೂರುತ್ತಿವೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮುಖ್ಯವಾದದ್ದು. ಅವುಗಳಿಂದಲೇ ಕನ್ನಡದ ಕಡೆಗಣನೆ ಆಗುತ್ತಿರುವುದು ಕಳವಳದ ಸಂಗತಿ ಎಂದು ಹೇಳಿದ್ದಾರೆ.

ಜಾಹೀರಾತು ಫಲಕಗಳಲ್ಲಿ ಕನ್ನಡ ಬಳಕೆಗೆ ಸಂಬಂಧಿಸಿದಂತೆ ನಗರಸಭೆ ಜಾಗೃತಿ ಮೂಡಿಸುತ್ತಿದ್ದರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನಿಯಮ ಉಲ್ಲಂಘಿಸಿ ಜಾಹೀರಾತು ಫಲಕ ಅಳವಡಿಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿ, ಮಾನ್ಯತೆ ರದ್ದುಪಡಿಸಬೇಕು. ಪ್ರಿಂಟಿಂಗ್ ಪ್ರೆಸ್‍ಗಳ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯನ್ನು ಕಡೆಗಣಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವೇದಿಕೆ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net