ಕೌಶಲ ಅಭಿವೃದ್ಧಿ ಕಾರ್ಯಾಗಾರ 7 ರಿಂದ

Basavaraj Dhannur - Copy
Published on

ಬೀದರ್: ವಚನ ವಿಜಯೋತ್ಸವ ಅಂಗವಾಗಿ ಬಸವ ಕಾಯಕ, ದಾಸೋಹ ಫೌಂಡೇಷನ್ ವತಿಯಿಂದ ಇಲ್ಲಿಯ ಕೆ.ಇ.ಬಿ. ಕಚೇರಿ ರಸ್ತೆಯಲ್ಲಿ ಇರುವ ಐ.ಎಂ.ಎ. ಹಾಲ್‍ನಲ್ಲಿ ಫೆ. 7 ರಿಂದ 9 ರ ವರೆಗೆ ಕೌಶಲ ಅಭಿವೃದ್ಧಿ ಕಾರ್ಯಾಗಾರ ಆಯೋಜಿಸಲಾಗಿದೆ.

ಫೆ. 7 ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ ಕಾರ್ಯಾಗಾರಕ್ಕೆ ಚಾಲನೆ ನೀಡುವರು. ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಅಕ್ಕ ಗಂಗಾಂಬಿಕೆ ಸಾನಿಧ್ಯ ವಹಿಸುವರು ಎಂದು ಬಸವ ಕಾಯಕ, ದಾಸೋಹ ಫೌಂಡೇಷನ್ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.

ಕಲಬುರಗಿಯ ಎಚ್.ಕೆ.ಇ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ, ಕೆ.ಆರ್.ಇ. ಸಂಸ್ಥೆಯ ಕಾರ್ಯದರ್ಶಿ ಸತೀಶ ಪಾಟೀಲ, ಬಸವಕಲ್ಯಾಣ ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಸಂತೋಷ ತಾಳಂಪಳ್ಳಿ, ಜಿ.ಎನ್.ಡಿ. ಎಂಜಿನಿಯರಿಂಗ್ ಕಾಲೇಜು ನಿರ್ದೇಶಕ ಸರ್ದಾರ್ ಪುನೀತ್‍ಸಿಂಗ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಫೌಂಡೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಅಧ್ಯಕ್ಷತೆ ವಹಿಸುವರು ಎಂದು ಹೇಳಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ, ಡಿ.ಬಿ. ಸನ್ ಟ್ರೈನಿಂಗ್ ಡಿವಿಜನ್ ಸಿಇಒ ಶಿವಾನಂದ ಡಿ.ವಿ. ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ವಚನ ವಿಜಯೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ ಕಾಜಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೊನ್ನಿಕೇರಿ, ರೋಟರಿ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಸೂರ್ಯಕಾಂತ ರಾಮಶೆಟ್ಟಿ, ಹೈ ಐಡಿಯಲ್ಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಿ.ಇ.ಒ. ಸಚ್ಚಿದಾನಂದ ಚಿದ್ರೆ ಉಪಸ್ಥಿತರಿರುವರು. ಫೌಂಡೇಷನ್ ಕಾರ್ಯದರ್ಶಿ ಸುವರ್ಣಾ ಬಿ. ಧನ್ನೂರ ಸ್ವಾಗತಿಸುವರು ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net