ಜಿಲ್ಲಾಮಟ್ಟದ ಆದರ್ಶ ದಂಪತಿ ಪ್ರಶಸ್ತಿ ಪ್ರದಾನ

Adarsh Dampati Award- Pandurang Beldar-1
Published on

ಬೀದರ್: ಇಲ್ಲಿಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ನಡೆದ ರಮಾಬಾಯಿ ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಹಾಗೂ ಉಷಾರಾಣಿ ಬೆಲ್ದಾರ್ ದಂಪತಿಗೆ ಜಿಲ್ಲಾಮಟ್ಟದ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಆದರ್ಶ ದಂಪತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಡಾ. ಜ್ಞಾನಪ್ರಕಾಶ ಸ್ವಾಮೀಜಿ ಅವರು ಶಾಲು ಹೊದಿಸಿ, ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಿದರು. ಆಣದೂರಿನ ಭಿಕ್ಕುಣಿ ಅರ್ಚಸ್ಮಿತಾ ಸಾನಿಧ್ಯ, ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net