ಬೀದರ್: ಇಲ್ಲಿಯ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಪ್ರೊ. ಬಿ.ಜಿ. ಮೂಲಿಮನಿ ಫೌಂಡೇಷನ್ ಸಹಯೋಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಿಮಿತ್ತ ಫೆ. 28 ಮತ್ತು ಮಾರ್ಚ್ 1 ರಂದು ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಫೆ. 28 ರಂದು ಮಧ್ಯಾಹ್ನ 1ಕ್ಕೆ ಶಾಲೆಯ ಜನಸೇವಾ ಮಂಟಪದಲ್ಲಿ ನಡೆಯಲಿರುವ ಸಮಾರಂಭದಲ್ಲಿ
ಶಾಲಾ ಶಿಕ್ಷಣ ಇಲಾಖೆಯ ವಿಜ್ಞಾನ ಸಂಪನ್ಮೂಲ ವ್ಯಕ್ತಿ ಗುಂಡಪ್ಪ ಹುಡಗೆ ಪ್ರದರ್ಶನಕ್ಕೆ ಚಾಲನೆ ನೀಡುವರು. ಪ್ರೊ. ಬಿ.ಜಿ. ಮೂಲಿಮನಿ ಫೌಂಡೇಷನ್ ಅಧ್ಯಕ್ಷ ಶಿವಲಿಂಗಪ್ಪ ಜಲಾದೆ ಹಾಗೂ ವಿದ್ಯಾಭಾರತಿ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಬಿ. ಸಜ್ಜನಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜನಸೇವಾ ಪ್ರತಿಷ್ಠಾನದ ಅಧ್ಯಕ್ಷ ಬಸವರಾಜ ಸ್ವಾಮಿ ಅಧ್ಯಕ್ಷತೆ ವಹಿಸುವರು.
ಮಾ. 1 ರಂದು ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ವಿಜ್ಞಾನ ಸಂಪನ್ಮೂಲ ವ್ಯಕ್ತಿಗಳಾದ ಮಹಮ್ಮದ್ ರಫಿ ಹಾಗೂ ದೇವಿಪ್ರಸಾದ್ ಕಲಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ತಿಳಿಸಿದ್ದಾರೆ.