ಅರಶದ್ ಅಲಿ ನಿಧನ: ಜಿಲ್ಲೆಗೆ ತುಂಬಲಾರದ ನಷ್ಟ

Published on

ಬೀದರ್: ವಿಧಾನ ಪರಿಷತ್ ಮಾಜಿ ಸದಸ್ಯ ಕಾಜಿ ಅರಶದ್ ಅಲಿ ಅವರ ನಿಧನದಿಂದ ಜಿಲ್ಲೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಹೇಳಿದ್ದಾರೆ.

ಅರಶದ್ ಅಲಿ ಅವರ ಅಗಲಿಕೆಯಿಂದ ರಾಜ್ಯ ಒಬ್ಬರು ಮೇಧಾವಿಯನ್ನು ಕಳೆದುಕೊಂಡಿದೆ. ಅವರು ಮಾಹಿತಿ ಕಣಜವಾಗಿದ್ದರು. ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಎಂ.ಎಲ್.ಸಿ, ಬಿಡಿಎ ಅಧ್ಯಕ್ಷರಾಗಿ ಸಾಕಷ್ಟು ಉತ್ತಮ ಕಾರ್ಯಗಳನ್ನು ಮಾಡಿದ್ದರು. ಬೀದರ್ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಪರ ಕಾರ್ಯಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದ್ದಾರೆ.

ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net