

ಬೀದರ್: ಬೆಂಗಳೂರಿನ ಉತ್ತರಹಳ್ಳಿಯ ಸೇಂಟ್ ಆಂಥೋನಿ ಚರ್ಚ್‍ಗೆ ನುಗ್ಗಿ ಪವಿತ್ರ ಸಂಸ್ಕಾರ ಹೊಂದಿದ ಮ್ಯಾನ್‍ಸ್ಟ್ರಾನ್ಸ್ ಕದ್ದೊಯ್ದ ದುಷ್ಕರ್ಮಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಇಂಡಿಯನ್ ಕ್ರಿಶ್ಚಿಯನ್ ವೆಲ್‍ಫೇರ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಸಂಜಯ್ ಜಾಗೀರದಾರ್ ಒತ್ತಾಯಿಸಿದ್ದಾರೆ.
ಕಿಡಿಗೇಡಿಗಳ ಕೃತ್ಯ ತೀವ್ರ ಖಂಡನೀಯ. ಪವಿತ್ರ ಪಾತ್ರೆ ಕಾಣೆಯಾದ ಘಟನೆಯಿಂದ ಕ್ರೈಸ್ತರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಕ್ರೈಸ್ತರ ಪ್ರಾರ್ಥನಾ ಮಂದಿರಗಳಿಗೆ ರಕ್ಷಣೆ ಒದಗಿಸಬೇಕು. ಈ ರೀತಿಯ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.