ಉಪ್ಪಾರ ನಿಗಮಕ್ಕೆ ಅಧ್ಯಕ್ಷರ ನೇಮಿಸಿ

Tanaji Sagar 22 (1)
Published on

ಬೀದರ್: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಹೊಸ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ಆಗ್ರಹಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಈಗಿನ ಸರ್ಕಾರ ಅಧಿಕಾರಕ್ಕೆ ಬಂದು 20 ತಿಂಗಳಾದರೂ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿಲ್ಲ. ಹೀಗಾಗಿ ಸಮಾಜದ ಹಿತಕ್ಕೆ ಪೂರಕ ಯೋಜನೆಗಳ ಅನುಷ್ಠಾನ ಹಾಗೂ ಇತರ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ನಿಗಮಕ್ಕೆ ನಿರೀಕ್ಷಿತ ಅನುದಾನ ಒದಗಿಸದಿರುವುದರಿಂದ ಸಮಾಜಕ್ಕೆ ಹೆಚ್ಚಿನ ಸೌಲಭ್ಯಗಳು ಸಿಗುತ್ತಿಲ್ಲ.ಕೂಡಲೇ ನಿಗಮಕ್ಕೆ ಅಧ್ಯಕ್ಷರನ್ನು ನೇಮಿಸಿ, ಹೆಚ್ಚಿನ ಅನುದಾನ ಕಲ್ಪಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net